Bible Versions
Bible Books

Psalms 1 (ERVKN) Easy to Read Version - Kannadam

1 ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
2 ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.
3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
4 ದುಷ್ಟರಾದರೊ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.
5 ನೀತಿವಂತರು ನ್ಯಾಯನಿರ್ಣಯಿಸುವಾಗ ಪಾಪಿಗಳಿಗೂ ದುಷ್ಟರಿಗೂ ಅಪರಾಧಿಗಳೆಂದು ತೀರ್ಪಾಗುವುದು.
6 ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×