Bible Versions
Bible Books

:
-

1 ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
2 ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
3 ಸುಳ್ಳಾಡುವ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.
4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
5 ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
6 ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.
7 ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.
8 ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×