Bible Versions
Bible Books

Psalms 130 (ERVKN) Easy to Read Version - Kannadam

1 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.
2 ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.
3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.
4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.
5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ.
6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರು ನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.
7 ಇಸ್ರೇಲೇ, ಯೆಹೋವನಲ್ಲಿ ಭರವಿಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.
8 ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×