1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.
2 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.
3 ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
4 ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!
5 ಹಾರ್ಪ್ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.
6 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!
7 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.
8 ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ!
9 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು *ಆಳಲು ಅಥವಾ ನ್ಯಾಯತೀರಿಸಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.