Bible Versions
Bible Books

Psalms 120 (KNV) Kannadam Old BSI Version

1 ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
2 ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
3 ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
4 ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
5 ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
6 ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
7 ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×