Bible Versions
Bible Books

Jeremiah 24 (KNV) Kannadam Old BSI Version

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
2 ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
3 ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
4 ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
5 ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
6 ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
7 ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
8 ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
9 ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.
10 ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
11 ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
12 ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
13 ನಿಶ್ಚಯವಾಗಿ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
14 ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
15 ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
17 ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
18 ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
19 ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
20 ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್‌ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
21 ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
22 ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
23 ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
24 ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
25 ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
26 ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
27 ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
29 ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
30 ಆದದರಿಂದ ನೀನು ಅವರಿಗೆ ವಿರೋಧವಾಗಿ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
31 ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
32 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
33 ದಿವಸದಲ್ಲಿ ಭೂಮಿಯ ಮೇರೆಯಿಂದ ಭೂಮಿಯ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
34 ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
35 ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
36 ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
37 ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
38 ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×